ಪುತ್ತೂರು: ಅಕ್ಷಯ ಎಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷಯ ಕಾಲೇಜು ನಲ್ಲಿ “ಎಲೈಟ್” ಆಂತರಿಕ ವಿನ್ಯಾಸ ಸಂಘ ಹಾಗೂ ಐಕ್ಯೂಎಸಿ ಸಹಭಾಗಿತ್ವದಲ್ಲಿ ಆಂತರಿಕ ವಿನ್ಯಾಸ ವಿಭಾಗದ ವಿದ್ಯಾರ್ಥಿಗಳಿಗೆ ‘ಆರ್ಥಿಕ ಸಾಕ್ಷರತೆ’ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಕಿಶೋರ್ ಕುಮಾರ್ ರೈ ಕೆ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಆರ್ಥಿಕ ಸಾಕ್ಷರತೆಯ ವ್ಯಾಪ್ತಿಗೆ ಬರುವ ಕೌಶಲ್ಯಗಳಲ್ಲಿ ಮನೆಯ ಬಜೆಟ್ ರೂಪಿಸುವುದು, ಸಾಲ ನಿರ್ವಹಣೆ, ವಿವಿಧ ಹಣಕಾಸು ಉತ್ಪನ್ನಗಳನ್ನು ಮೌಲ್ಯಮಾಪನ ಮಾಡುವುದು, ಹೂಡಿಕೆಗಳನ್ನು ಆಯ್ಕೆ ಮಾಡುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ವಿವರಿಸಿದರು. ವಿದ್ಯಾರ್ಥಿಗಳೊಂದಿಗೆ ಪ್ರಶ್ನೋತ್ತರ ನಡೆಸುವ ಮೂಲಕ ಕಾರ್ಯಗಾರವನ್ನು ಪರಿಣಾಮಕಾರಿಯಾಗಿ ನಡೆಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಂತರಿಕ ವಿನ್ಯಾಸ ವಿಭಾಗದ ಮುಖ್ಯಸ್ಥರು ಹಾಗೂ ಕಾಲೇಜಿನ ಉಪಪ್ರಾಂಶುಪಾಲರಾದ ರಕ್ಷಣ ಟಿ.ಆರ್. ವಹಿಸಿದ್ದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ಕಾವ್ಯ, ವಿಸ್ಮಯ ಹಾಗೂ “ಎಲೈಟ್” ಸಂಘದ ಅಧ್ಯಕ್ಷ ವಿದ್ಯಾರ್ಥಿ ಸೃಜನ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.








