ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರ ದೇವನಹಳ್ಳಿ ಸಮೀಪದ ಟೋಲ್ ಪ್ಲಾಜಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.


ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಅತಿವೇಗದಿಂದ ಬಂದ ಪರಿಣಾಮ, ಟೋಲ್ ಪ್ಲಾಜಾ ಬೂತ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಬಸ್‌ನಲ್ಲಿ ಮೊಬೈಲ್ ಫೋನ್‌ಗಳನ್ನು ಸಾಗಿಸಲಾಗುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ರಕ್ಷಣೆಗೆಂದು ಧಾವಿಸಿದವರು ಮೊಬೈಲ್ ನ್ನು ಕಸಿದು ಕೊಂಡ ಅಮಾನವೀಯ ಘಟನೆ ನಡೆದಿದೆ.



ಘಟನೆಯ ವೇಳೆ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಟೋಲ್ ಪ್ಲಾಜಾ ಬೂತ್‌ಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅತಿವೇಗ ಚಾಲನೆಯಿಂದಾಗಿ ಇಂತಹ ಅಪಘಾತಗಳು ಮರುಕಳಿಸುತ್ತಿದ್ದು, ಸಂಬಂಧಪಟ್ಟ ಇಲಾಖೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.




