ಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ (Accident) ಸಾವನ್ನಪ್ಪಿದ್ದಾರೆ.
ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ.





ಪಲಮನೇರ್ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ಸು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ನಿಂತಿತ್ತು. ಈ ವೇಳೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲೇ ಮೃತದೇಹಗಳು ಸಿಲುಕಿಕೊಂಡಿದ್ದವು. ಚಾಲಕನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪೊಲೀಸರು ಬೆಂಗಳೂರು ಮೂಲದ ದಂಪತಿಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

