ಕಾರ್ಕಳ: ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಬಂದ ಟಿಪ್ಪರ್ ಲಾರಿ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಅಡಪಾಡಿ ಬಳಿ ಗುರುವಾರ ಸಂಭವಿಸಿದೆ.

ಮೃತರನ್ನು ಹಿರಿಯಡ್ಕದ ಕುಂಜಬೈಲು ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ.
ಗಣೇಶ್ ಅವರು ತಮ್ಮ ಮೋಟಾರ್ ಸೈಕಲ್‌ನಲ್ಲಿ ಹಂಪನಕಟ್ಟೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಹಿಂಬದಿಯಿಂದ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಟಿಪ್ಪರ್ ಲಾರಿಯ ಹಿಂಬದಿ ಚಕ್ರವು ಗಣೇಶ್ ಅವರ ತಲೆಯ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಲ್ಮೆಟ್ ಧರಿಸಿದ್ದರೂ ಅಪಘಾತದ ತೀವ್ರತೆ ಕಾರಣ ಜೀವ ಉಳಿಯಲಿಲ್ಲ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಕಾರ್ಕಳ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಈ ಕುರಿತು ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *