ಉಜಿರೆ: ಉಜಿರೆಯಲ್ಲಿ ಅತಿ ವೇಗದಿಂದ ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದ ಕಾರೊಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಘಟನೆ ಜನವರಿ 28ರಂದು ರಾತ್ರಿ ನಡೆದಿದೆ.

ಉಜಿರೆ ಬೆಕಾಳು ಕ್ರಾಸ್ ಬಳಿ ಪೇಟೆಯೊಳಗೆ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ಯುವತಿಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳು ಯುವತಿಯನ್ನು ತಕ್ಷಣ ಉಜಿರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಡಿಕ್ಕಿಯ ತೀವ್ರತೆಯಿಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಯುವಕ ಪರಾರಿಯಾಗಿದ್ದಾನೆ. ಘಟನೆಯಿಂದ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

ಘಟನೆಯ ಮಾಹಿತಿ ಪಡೆದ ಉಜಿರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಅತಿ ವೇಗ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ನಗರ ಪ್ರದೇಶಗಳಲ್ಲಿ ವಾಹನ ಚಾಲಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *