ಕಡಬ: ಹನುಮಾನ್ ನಗರ, ಕೊಡಿಂಬಾಳ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಸ್ವತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ.
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ಆರ್.) ಸಂಸ್ಥೆಯ ಘಟಕವಾಗಿರುವ ಈ ಶಾಲೆಯಲ್ಲಿ ಕೆಜಿ ವಿಭಾಗದಿಂದ 9ನೇ ತರಗತಿವರೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.



ಶಾಲೆಯ ವಿಶೇಷತೆಗಳಾಗಿ ‘ಪಂಚಕೋಶ ಶಿಕ್ಷಣ’ (Five Faceted Education) ಪರಿಕಲ್ಪನೆಯಡಿ ಬೌದ್ಧಿಕ, ಆಧ್ಯಾತ್ಮಿಕ, ಮಾನಸಿಕ, ದೈಹಿಕ ಹಾಗೂ ಭಾವನಾತ್ಮಕ ಬೆಳವಣಿಗೆಗೆ ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕಾಗಿ ವಿವಿಧ ಪಾಠ್ಯ ಹಾಗೂ ಪಾಠ್ಯೇತರ ಚಟುವಟಿಕೆಗಳು, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆ ಜಾರಿಯಲ್ಲಿದೆ.



“ಉಜ್ವಲ ಭವಿಷ್ಯಕ್ಕಾಗಿ ಇಂದೇ ಪ್ರವೇಶ ಪಡೆಯಿರಿ” ಎಂಬ ಸಂದೇಶದೊಂದಿಗೆ ಪೋಷಕರಿಗೆ ಶಾಲಾ ಆಡಳಿತ ಮಂಡಳಿ ಕರೆ ನೀಡಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು:
8762735069, 9791826892, 9740520502
ಇ-ಮೇಲ್: saraswathiemskadaba@gmail.com



