ಪುತ್ತೂರು/ಸುಳ್ಯ: ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆ (AISSEE)ಯಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ನಾಲ್ವರು ವಿದ್ಯಾರ್ಥಿಗಳು ಉತ್ತೀರ್ಣರಾಗಿ ಅಂತಿಮ ಹಂತದ ಆಯ್ಕೆ ಪ್ರಕ್ರಿಯೆಗೆ ಅರ್ಹತೆ ಪಡೆದಿದ್ದಾರೆ. ಸತತ ನಾಲ್ಕು ವರ್ಷಗಳಿಂದ ವಿವಿಧ ಅರ್ಹತಾ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ದಾಖಲಿಸುತ್ತಿರುವ ಪ್ರತಿಷ್ಠಿತ ಸಂಸ್ಥೆಯಾಗಿ ವಿದ್ಯಾಮಾತಾ ಅಕಾಡೆಮಿ ಮತ್ತೊಮ್ಮೆ ಗಮನ ಸೆಳೆದಿದೆ.

ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ ಒಂದೇ ವೇದಿಕೆಯಲ್ಲಿ ಹಲವು ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿದೆ. ಈ ವರ್ಷವೂ ಸಮರ್ಪಕ ಮಾರ್ಗದರ್ಶನ ಹಾಗೂ ತರಬೇತಿಯ ಮೂಲಕ ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಯಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವಲ್ಲಿ ಅಕಾಡೆಮಿ ಯಶಸ್ವಿಯಾಗಿದೆ.
ಉತ್ತೀರ್ಣರಾದವರಲ್ಲಿ ಸುಳ್ಯ ತಾಲೂಕು ಮಂಡೆಕೋಲು ಗ್ರಾಮದ ಪೆರಾಲು ಸಾರಂಜ ಮನೆ ನಿವಾಸಿ ಹರೀಶ್ ಎಸ್ ಅವರ ಪುತ್ರಿ ಶ್ರಾವ್ಯ ಎಸ್ (ಕೆವಿಜಿ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್, ಸುಳ್ಯ), ಸುಳ್ಯ ತಾಲೂಕು ನೆಲ್ಲೂರು ಕೆಮ್ರಾಜೆ ಗ್ರಾಮದ ದೋಳ ಮನೆ ನಿವಾಸಿ ಕೃಷ್ಣ ಪ್ರಸಾದ್ ಅವರ ಪುತ್ರ ಧವನ್ ಡಿ.ಕೆ (ಮಾರುತಿ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್, ಗೂನಡ್ಕ), ಪುತ್ತೂರು ಕಸಬಾ ರೋಟರಿಪುರ ನಿವಾಸಿ ಚಂದ್ರಶೇಖರ ಅವರ ಪುತ್ರಿ ಕೃತಿಕಾ ಸಿ (ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ), ಹಾಗೂ ಪುತ್ತೂರು ತಾಲೂಕು ಇರ್ದೆ ನಿವಾಸಿ ಶ್ಯಾಮಜೀತ್ ರೈ ಅವರ ಪುತ್ರ ಹಾರುಷ್ ರೈ (ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ) ಸೇರಿದ್ದಾರೆ.

ಈ ಸಾಧನೆಯ ಮೂಲಕ ವಿದ್ಯಾರ್ಥಿಗಳು ತಮ್ಮ ಪೋಷಕರ ಹಾಗೂ ತರಬೇತಿ ನೀಡಿದ ವಿದ್ಯಾಮಾತಾ ಅಕಾಡೆಮಿಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ತರಬೇತುದಾರರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ. ಸೈನಿಕ, ನವೋದಯ ಮತ್ತು ಮೊರಾರ್ಜಿ ಶಾಲಾ ಪ್ರವೇಶ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ನೂರಾರು ವಿದ್ಯಾರ್ಥಿಗಳು ಈಗಾಗಲೇ ಆಯ್ಕೆಯಾಗಿರುವುದನ್ನು ಇಲ್ಲಿ ಸ್ಮರಿಸಬಹುದು.
ವಿದ್ಯಾರ್ಥಿಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಅವರು, “ಬಾಲ್ಯದಲ್ಲೇ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡಿ ಭವಿಷ್ಯದ ಅಧಿಕಾರಿಗಳನ್ನು ರೂಪಿಸುವ ನಮ್ಮ ಯೋಜನೆಗೆ ಈ ಫಲಿತಾಂಶ ಮತ್ತಷ್ಟು ಉತ್ಸಾಹ ನೀಡಿದೆ. ಮುಂದೆಯೂ ವಿದ್ಯಾರ್ಥಿಗಳಿಗೆ ನಿರಂತರ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ವಿದ್ಯಾಮಾತಾ ಅಕಾಡೆಮಿ ಸದಾ ಸಿದ್ದವಾಗಿದೆ” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *