ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಅಖಿಲೇಶ್ ವಿಶ್ವೇಶ್ವರಯ್ಯ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ (VTU) ಪುರುಷರ ವಾಲಿಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಆಂಧ್ರಪ್ರದೇಶದ ಕಾಕಿನಾಡದಲ್ಲಿ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಡಿಸೆಂಬರ್ 10ರಿಂದ 14ರವರೆಗೆ ನಡೆಯಲಿರುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪುರುಷರ ವಾಲಿಬಾಲ್ ಚಾಂಪಿಯನ್‌ಶಿಪ್ 2025–26ರಲ್ಲಿ ಅಖಿಲೇಶ್ ವಿಟಿಯುವನ್ನು ಪ್ರತಿನಿಧಿಸಲಿದ್ದಾರೆ.



ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನ ಲಭ್ಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಕೆ. ತಿಳಿಸಿದ್ದಾರೆ.




