ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ (ರಿ.), ವಿಟ್ಲ ಇವರ ವತಿಯಿಂದ 135ನೇ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಪ.ಜಾತಿ ಪಂಗಡದ ಮಕ್ಕಳಿಗಾಗಿ ಆಟೋಟ ಸ್ಪರ್ಧೆಯನ್ನು ಆಯೋಜಿಸಲಾಯಿತು.







ದಿನಾಂಕ 12-04-2026 ರಂದು ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಶಾಲೆ, ವಿಟ್ಲ ಇದರ ವಠಾರದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ವಿಟ್ಲ ವಲಯ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷರಾದ ಶ್ರೀ ಲಿಯೋ ಲಾಸ್ರದೊ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ವಿಟ್ಲದ ಅಧ್ಯಕ್ಷರಾದ ಶ್ರೀ ಸಂಜೀವ ಪೂಜಾರಿ ಅವರು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಮುಖ್ಯ ಅತಿಥಿಗಳಾಗಿ ಬಂಟ್ವಾಳದ ಯುವ ನ್ಯಾಯವಾದಿಗಳಾದ ತುಳಸಿದಾಸ್ ಆರ್., ನಲಿಕೆ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ರಾಮಣ್ಣ ಪಿಲಿಂಜ ಹಾಗೂ ಮುಗೇರ ಸಂಘದ ಅಧ್ಯಕ್ಷರಾದ ಶ್ರೀ ಸುರೇಶ್ ಜಿ. ಪೆರುವಾಯಿಗುತ್ತು ಉಪಸ್ಥಿತರಿದ್ದರು.
ಸಂಘದ ಹಲವು ಪದಾಧಿಕಾರಿಗಳು ವೇದಿಕೆಯಲ್ಲಿ ಭಾಗವಹಿಸಿದ್ದು, ನೂರಾರು ಮಕ್ಕಳು ಉತ್ಸಾಹದಿಂದ ಸ್ಪರ್ಧೆಯಲ್ಲಿ ಪಾಲ್ಗೊಂಡರು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
