Author: PrimeTV News

ಸುಬ್ರಹ್ಮಣ್ಯ: ಮನೆ ಅಂಗಳದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ – ಗ್ರಾಮಸ್ಥರಲ್ಲಿ ಆತಂಕ-PRIME TV

ಸುಬ್ರಹ್ಮಣ್ಯ: ಸಮೀಪದ ಏನೆಕಲ್ಲು ಗ್ರಾಮದ ಪರಂಪಾಡಿ ಪ್ರದೇಶದಲ್ಲಿ ಚಿರತೆ ಕಾಟ ಮತ್ತೊಮ್ಮೆ ಹೆಚ್ಚಳ ಕಂಡಿದ್ದು, ಮನೆ ಅಂಗಳದಲ್ಲಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಏಪ್ರಿಲ್ 8ರ ತಡರಾತ್ರಿ ನಡೆದಿದೆ. ಅರಂಪಾಡಿ ನಿವಾಸಿ ಈಶ್ವರಗೌಡ ಅವರ ಮನೆಯ ಅಂಗಳದಲ್ಲಿ ಮಲಗಿದ್ದ ನಾಯಿಯನ್ನು ಚಿರತೆ…

ಕಡಬ : ಹಸಿ ಮೀನು ಮಾರುಕಟ್ಟೆಯಲ್ಲಿ ತಾಜಾ ಮೀನುಗಳ ಕೊರತೆ – ಸಾರ್ವಜನಿಕರ ದೂರು, ಇಬ್ಬರು ವ್ಯಾಪಾರಿಗಳಿಗೆ ನೋಟಿಸ್-PRIME TV

ಕಡಬ : ಪಟ್ಟಣದ ಹಸಿ ಮೀನು ಮಾರುಕಟ್ಟೆಯಲ್ಲಿ ತಾಜಾ ಮೀನುಗಳು ಲಭ್ಯವಾಗುತ್ತಿಲ್ಲ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಕಡಬ ಪಟ್ಟಣ ಪಂಚಾಯಿತಿ ಕ್ರಮ ಕೈಗೊಂಡಿದ್ದು, ಇಬ್ಬರು ವ್ಯಾಪಾರಿಗಳಿಗೆ ಕಟ್ಟುನಿಟ್ಟಿನ ನೋಟಿಸ್ ಜಾರಿಗೊಳಿಸಿದೆ. ಪಂಚಾಯಿತಿ ಕ್ರಮದ ವಿರುದ್ಧ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ-PRIME TV

ಟೆಲ್‌ ಅವಿವ್‌: ಲೆಬನಾನ್‌ ಮೇಲೆ ಕೇವಲ 10 ನಿಮಿಷಗಳಲ್ಲಿ ಇಸ್ರೇಲ್‌ ವಾಯುಪಡೆ 100 ಕ್ಷಿಪಣಿ ದಾಳಿ ನಡೆಸಿದೆ. ಇದನ್ನು ಈ ಯುದ್ಧದ ಅತ್ಯಂತ ದೊಡ್ಡ ಸಂಘಟಿತ ದಾಳಿ ಎಂದು ಇಸ್ರೇಲ್ ಬಣ್ಣಿಸಿದೆ. ರಾಜಧಾನಿ ಬೈರೂತ್ ಮಧ್ಯಭಾಗ, ಬೆಕಾ ವ್ಯಾಲಿ ಮತ್ತು ದಕ್ಷಿಣ…

ಅಂತಿಬೆಟ್ಟು ಅಂಗನವಾಡಿ ಕಟ್ಟಡ ಉದ್ಘಾಟನೆ-PRIME TV

ಕಡಬ : ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತಿಬೆಟ್ಟುವಿನಲ್ಲಿ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಲಾಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಸಣ್ಣ ಮಕ್ಕಳಿಗೆ ಉತ್ತಮ ಸಂಸ್ಕಾರ…

ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ-PRIME TV

ಬೆಂಗಳೂರು: ಆಟವಾಡುತ್ತಾ ಮೂರನೇ ಮಹಡಿಯಿಂದ ಬಿದ್ದು ಒಂದೂವರೆ ವರ್ಷದ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಾಯಂಡಳ್ಳಿಯಲ್ಲಿ ನಡೆದಿದೆ. ಆಟವಾಡುತ್ತಾ ಮಗು ಕೆಳಗೆ ಬಿದ್ದ ಎದೆ ಝಲ್ ಎನ್ನುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಏ.6ರಂದು ಈ ಘಟನೆ ನಡೆದಿದೆ. ಮಗು ಕೆಳಗೆ…

ಪುತ್ತೂರು: ಹನುಮಗಿರಿ ಬ್ರಹ್ಮಕಲಶೋತ್ಸವದ ಅಂಗವಾಗಿ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ-PRIME TV

ಪುತ್ತೂರು: ಹನುಮಗಿರಿ ಶ್ರೀ ಕೋದಂಡರಾಮ, ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಏಪ್ರಿಲ್ 9ರಿಂದ 12ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಇದರ ಭಾಗವಾಗಿ ಬುಧವಾರ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯ ವಠಾರದಿಂದ ಭವ್ಯ ಹಸಿರು…

ಪುತ್ತೂರು: ದೇವಳದ ಹೆಸರು ಬಳಸಿ ಷಡ್ಯಂತ್ರ ಆರೋಪ – ಕಾನೂನು ಕ್ರಮಕ್ಕೆ ಸಂರಕ್ಷಣಾ ಸಮಿತಿ ಆಗ್ರಹ-PRIME TV

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಳದ ಹೆಸರನ್ನು ಉಲ್ಲೇಖಿಸಿ ಷಡ್ಯಂತ್ರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ. ಇಂದು ಸಮಿತಿಯ ಸದಸ್ಯರು ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ ಅವರಿಗೆ ಮನವಿ…

ಪುತ್ತೂರು: ಎ.12ರಂದು ಮಂಗಳೂರಿನಲ್ಲಿ ಬಂಟರ ಮಾತೃ ಸಂಘದ ಬಹಿರಂಗ ಅಧಿವೇಶನ – ಸಾಧಕರಿಗೆ ಸನ್ಮಾನ, ವಿವಿಧ ಕಾರ್ಯಕ್ರಮಗಳ ಘೋಷಣೆ-PRIME TV

ಪುತ್ತೂರು: ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಬಹಿರಂಗ ಅಧಿವೇಶನವು ಏಪ್ರಿಲ್ 12ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಎಂದು ಸಂಘದ ಉಪಾಧ್ಯಕ್ಷ ಹಾಗೂ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಹೇಮನಾಥ ಶೆಟ್ಟಿ ಕಾವು…

ಪುತ್ತೂರಿನಲ್ಲಿ ಬಿ-ಖಾತಾ ನಿವೇಶನಗಳಿಗೆ ಎ-ಖಾತಾ: ಸರ್ಕಾರದ ಆದೇಶ, ಸಾರ್ವಜನಿಕರಿಗೆ ಮಹತ್ವದ ಅವಕಾಶ-PRIME TV

ಪುತ್ತೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ರಚಿಸಲಾದ ಬಡಾವಣೆಗಳಲ್ಲಿನ ಬಿ-ಖಾತಾ ಹೊಂದಿರುವ ನಿವೇಶನಗಳಿಗೆ ಎ-ಖಾತಾ ನೀಡಲು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ, ನಿವೇಶನದ ಸಂಪರ್ಕ ರಸ್ತೆಯನ್ನು ನಗರಸಭೆಯು ಸಾರ್ವಜನಿಕ ರಸ್ತೆ ಎಂದು ಘೋಷಿಸಿ ಅದರ ದಾಖಲೆಗಳನ್ನು…

ಕಡಬ: ಅಕ್ರಮ ಸಾಗಾಟದಲ್ಲಿ ವಶಪಡಿಸಿದ 19 ಜಾನುವಾರುಗಳು ಬಿಸಿಲಿಗೆ ಕಂಗಾಲು – ಗೋಶಾಲೆಗೆ ಸ್ಥಳಾಂತರಕ್ಕೆ ಆಗ್ರಹ-PRIME TV

ಕಡಬ: ನೂಜಿಬಾಳ್ತಿಲ ಗ್ರಾಮದ ಕನ್ವರೆ ಪ್ರದೇಶದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 19 ಗೋವುಗಳನ್ನು ಏಪ್ರಿಲ್ 3ರಂದು ಕಡಬ ಪೊಲೀಸರು ವಶಕ್ಕೆ ಪಡೆದಿದ್ದರೂ, ಐದು ದಿನಗಳಿಂದ ಠಾಣಾ ಆವರಣದಲ್ಲಿ ಕಟ್ಟಿಹಾಕಿರುವುದರಿಂದ ಬಿಸಿಲಿನ ತಾಪಕ್ಕೆ ಜಾನುವಾರುಗಳು ಹೈರಾಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಕಡಬ ಠಾಣೆಯ…