ಪುತ್ತೂರು: ಪುರುಷರಕಟ್ಟೆ–ಶಿಬರ–ನಡುವಾಲ್ ರಸ್ತೆ ಅಭಿವೃದ್ಧಿ ಹಾಗೂ ಶಾಶ್ವತ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿದ್ದಕ್ಕೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ ಅಳವಡಿಸಿದ್ದ ಶಾಸಕ ಅಶೋಕ್ ರೈ ಅವರ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ನಡೆದಿದೆ.

ಈ ಕುರಿತು ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಕೈಂದಾಡಿ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ನದುವಲ್ ಗ್ರಾಮಕ್ಕೆ ರಸ್ತೆ ಸಂಪರ್ಕ ಇರಲಿಲ್ಲ. ಈ ಪ್ರದೇಶಕ್ಕೆ ಭೇಟಿ ನೀಡಿದ್ದ ಶಾಸಕ ಅಶೋಕ್ ರೈ ಅವರು ಸ್ಥಳೀಯರೊಂದಿಗೆ ಚರ್ಚೆ ನಡೆಸಿ ರಸ್ತೆ ನಿರ್ಮಾಣಕ್ಕೆ ವ್ಯವಸ್ಥೆ ಮಾಡಿದ್ದು, ಕಾಮಗಾರಿಗೆ ₹5 ಲಕ್ಷ ಅನುದಾನ ಒದಗಿಸಿದ್ದರು.

ಇದನ್ನು ಅಭಿನಂದಿಸಿ ಸ್ಥಳೀಯರು ಬ್ಯಾನರ್ ಅಳವಡಿಸಿದ್ದರು. ಆದರೆ ಅದನ್ನು ಕಿಡಿಗೇಡಿಗಳು ಹರಿದು ಹಾಕಿರುವುದರಿಂದ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಈ ಘಟನೆಯ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿ ಸುಗಮವಾಗಿ ನಡೆಯಲಿ ಎಂಬ ಆಶಯದೊಂದಿಗೆ ದೇವರು ಹಾಗೂ ದೈವಗಳಿಗೆ ಹರಕೆ ಸಲ್ಲಿಸಲಾಗಿದೆ. ಘಟನೆ ಕುರಿತು ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *