ಬಿಳಿನೆಲೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಬಂಟ್ರ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ರ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ – ಪ್ರತಿಭಾ ವೈಭವ 2025–26’ ಕಾರ್ಯಕ್ರಮ ಬಿಳಿನೆಲೆ ಗ್ರಾಮ, ಪುತ್ತಿಲ ಬೈಲಡ್ಕ ಶಾಲೆಯಲ್ಲಿ ಏರ್ಪಡಿಸಲಾಗಿದೆ.




ಈ ಕಾರ್ಯಕ್ರಮವು ನವೆಂಬರ್ 24, 2025 (ಸೋಮವಾರ) ರಂದು ದ. ಕ. ಜಿ. ಪಂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪುತ್ತಿಲ ಬೈಲಡ್ಕದಲ್ಲಿ ನಡೆಯಲಿದೆ.
ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ, ಕೌಶಲ್ಯ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿರುವ ಈ ಪ್ರತಿಭಾ ಕಾರಂಜಿಯಲ್ಲಿ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.
ಆಯೋಜಕರು ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರಿಗೆ ಆತ್ಮೀಯ ಸ್ವಾಗತ ಕೋರಿದ್ದಾರೆ.



