ಪುತ್ತೂರು: ಕೇರಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಡಬಲ್ ಡಿಜಿಟ್ ಸಂಖ್ಯೆಯಲ್ಲಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಂಜೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪುತ್ತೂರಿನಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇರಳದಲ್ಲಿ ಬಿಜೆಪಿ ಸುಮಾರು 20% ಮತಗಳನ್ನು ಪಡೆದಿದ್ದು, ತ್ರಿಶೂರಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಗಳಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ ಎಂದರು. ಕೇರಳದಿಂದ ಲೋಕಸಭೆಗೆ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಕಳುಹಿಸಿದ್ದೇವೆ, ಇದೇ ರೀತಿಯಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲೂ ಉತ್ತಮ ಸಾಧನೆ ಮಾಡುವ ನಿರೀಕ್ಷೆಯಿದೆ ಎಂದು ಹೇಳಿದರು.

ಬಿಜೆಪಿ ಹಿಂದುತ್ವ ಆಧಾರಿತ ಪಕ್ಷವಾಗಿದ್ದು, ಕರ್ನಾಟಕ, ಕರಾವಳಿ ಅಥವಾ ಕೇರಳ ಎಂಬ ಭೇದವಿಲ್ಲದೆ ಒಂದೇ ತತ್ವದ ಮೇಲೆ ಕಾರ್ಯನಿರ್ವಹಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.
ಬಿಜೆಪಿ ಸಂಸದ ಸುರೇಶ್ ಗೋಪಿ ಅವರು “ಬೀಫ್ ಸೇವಿಸುವುದರಲ್ಲಿ ತಪ್ಪಿಲ್ಲ” ಎಂದು ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸುರೇಂದ್ರನ್, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಪಕ್ಷದ ಸಾಮೂಹಿಕ ನಿಲುವು ಅಲ್ಲ ಎಂದು ಹೇಳಿದರು.

Leave a Reply

Your email address will not be published. Required fields are marked *