ಪುತ್ತೂರು : ಮಹಾತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ರಾಜಕೀಯ ಕಾರ್ಯಕ್ರಮ ನಡೆಸಿರುವ ಕುರಿತು ಪುತ್ತೂರು ಬಿಜೆಪಿ ನಗರ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಇಂದು ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.




ವಿಷಯ: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೇಸ್ ಪಕ್ಷದ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಇದರ ವತಿಯಿಂದ ರಾಜಕೀಯ ಕಾರ್ಯಕ್ರಮ ನಡೆಸಿರುವ ಕುರಿತು ಕ್ರಮ ಕೈಗೊಳ್ಳುವಂತೆ ಅರ್ಜಿ
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು Karnataka Hindu Religious Institutions and Charitable Endowments Act, 1997 ಅಡಿಯಲ್ಲಿ ನೋಂದಾಯಿತವಾಗಿದ್ದು ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೆ, ಒಳಪಟ್ಟಿರುವ
Karnataka Hindu Religious Institutions and Charitable Endowments Act, 1997 ಕಾಯ್ದೆಯ ಪ್ರಕಾರ ದೇವಸ್ಥಾನದ ಆಸ್ತಿ, ಹಾಲ್, ಕಟ್ಟಡಗಳು ಹಾಗೂ ಇತರೆ ಸೌಕರ್ಯಗಳು ಧಾರ್ಮಿಕ ಉದ್ದೇಶಗಳಿಗೆ ಮಾತ್ರ ಬಳಸಬೇಕು ಎಂದು ಕಾನೂನು ಸ್ಪಷ್ಟಪಡಿಸುತ್ತದೆ. ವಿಶೇಷವಾಗ Section 63 ಪ್ರಕಾರ ದೇವಸ್ಥಾನದ ಆಸ್ತಿಗಳ ಬಳಕೆ ಮತ್ತು ಅದರ ನಿರ್ವಹಣೆ ಧಾರ್ಮಿಕ ಉದ್ದೇಶಗಳಿಗೆ ಮಾತ್ರ ಸೀಮಿತವಾಗಿರಬೇಕು ಮತ್ತು ಅವುಗಳ ದುರುಪಯೋಗವನ್ನು ತಡೆಯುವ ಜವಾಬ್ದಾರಿ ಆಡಳಿತಾಧಿಕಾರಿಗಳಿಗೆ ಇದೆ.
ಆದರೆ, ದಿನಾಂಕ 08.03.2026 ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೇಸ್ ಇದರ ವತಿಯಿಂದ ಮಹಿಳಾ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ದೇವಸ್ಥಾನದ ಪವಿತ್ರ ಆವರಣದಲ್ಲಿ ರಾಜಕೀಯ ಚಟುವಟಿಕೆಗಳನ್ನು ನಡೆಸುವುದು ದೇವಸ್ಥಾನದ ಧಾರ್ಮಿಕ ಸ್ವರೂಪಕ್ಕೆ ಧಕ್ಕೆ ತರುವಂತದ್ದು ಮತ್ತು ಮೇಲ್ಕಂಡ ಕಾಯ್ದೆಯ ಉದ್ದೇಶ ಹಾಗೂ ನಿಯಮಗಳಿಗೆ ವಿರುದ್ಧವಾಗಿದೆ. ಮತ್ತು ಈ ಕಾರ್ಯಕ್ರಮದಲ್ಲಿ ಅನ್ಯಧರ್ಮದ ವ್ಯಕ್ತಿಗಳು ಕೂಡ ಭಾಗಿಯಾಗಿರುವುದು ದೇವಸ್ಥಾನದ ಭಕ್ತರಾದ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಕಾರ್ಯ ನಡೆದಿರುತ್ತದೆ.
ಇಂತಹ ಘಟನೆಗಳು ಮುಂದುವರಿದರೆ ಸಾರ್ವಜನಿಕರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆ ಇದ್ದು, ಸಮಾಜದಲ್ಲಿ ಅನಾವಶ್ಯಕ ಉದ್ವಿಗ್ನತೆ ಉಂಟಾಗುವ ಪರಿಸ್ಥಿತಿ ಉಂಟಾಗಬಹುದು.ಆದುದರಿಂದ, ದಯವಿಟ್ಟು ಕೆಳಕಂಡಂತೆ ಕ್ರಮ ಕೈಗೊಳ್ಳುವಂತೆ ವಿನಂತಿಸುತ್ತೇನೆ. ದೇವಸ್ಥಾನದ ನಟರಾಜ ವೇದಿಕೆಯಲ್ಲಿ ರಾಜಕೀಯ ಕಾರ್ಯಕ್ರಮ ನಡೆಸಿದ ಘಟನೆ ಕುರಿತು ತಕ್ಷಣ ತನಿಖೆ ನಡೆಸಬೇಕು.
ದೇವಸ್ಥಾನದ ಆಸ್ತಿಯನ್ನು ದುರುಪಯೋಗಪಡಿಸಿಕೊಂಡ ಸಂಬಂಧಪಟ್ಟವರ ವಿರುದ್ಧ Karnataka Hindu Religious Institutions and Charitable Endowments Act, 1997 ಸೂಕ್ತ ಕ್ರಮ ಕೈಗೊಳ್ಳಬೇಕು.ಮುಂದಿನ ದಿನಗಳಲ್ಲಿ ದೇವಸ್ಥಾನದ ಆಸ್ತಿಯನ್ನು ರಾಜಕೀಯ ಕಾರ್ಯಕ್ರಮಗಳಿಗೆ ಬಳಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು. ಈ ಬಗ್ಗೆ ತಾವು ಕ್ರಮ ಕೈಗೊಂಡ ಬಗ್ಗೆ ತಮ್ಮ
ಕಚೇರಿಯ ಹಿಂಬರಹವನ್ನು 7 ದಿನಗಳೊಳಗೆ ನಿರೀಕ್ಷಿಸುತ್ತೇವೆ ಎಂದು ದೂರಿನಲ್ಲಿ ಬರೆಯಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸ್ವರ್ಣಲತಾ ಹೆಗಡೆ, ಕಾರ್ಯದರ್ಶಿ ಜಯಲಕ್ಷ್ಮಿ, ನಗರ ಮಂಡಲ ಅಧ್ಯಕ್ಷರು ಶಿವಕುಮಾರ್ ಪಿಬಿ, ಪ್ರಧಾನ ಕಾರ್ಯದರ್ಶಿ ಶಶಿಧರ್ ನಾಯಕ್ , ಓಬಿಸಿ ಮೋರ್ಚಾ ಅಧ್ಯಕ್ಷರು ನಿರಂಜನ್ ಮಾನ್ಯ, ಶಕ್ತಿಕೇಂದ್ರ ಅಧ್ಯಕ್ಷರು ನಾಗೇಂದ್ರ ಬಾಳಿಗ ,ಗ್ರಾಮಾಂತರ ಮಂಡಲ ಉಪಾಧ್ಯಕ್ಷರು ನಾಗೇಶ್ ಕಾರ್ಯಕರ್ತ ರವಿ ಉಪಸ್ಥಿತರಿದ್ದರು.



