ಕಡಬ: ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ಹಾಗೂ ದುರ್ಗವಾಹಿನಿ ಕಡಬ ಪ್ರಖಂಡಗಳ ಸಂಯುಕ್ತ ಆಶ್ರಯದಲ್ಲಿ ಇಂದು ಕಡಬದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಡೆದ ಕರಸೇವೆಯ ಸಂದರ್ಭ ಹುತಾತ್ಮರಾದ ಹಿಂದೂ ಬಂಧುಗಳ ಬಲಿದಾನವನ್ನು ಸ್ಮರಿಸುವ ಉದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಈ ರಕ್ತದಾನ ಶಿಬಿರ ಕಡಬದ ಸರಸ್ವತಿ ವಿದ್ಯಾ ಸಂಸ್ಥೆ ಆವರಣದಲ್ಲಿ ನಡೆಯುತ್ತಿದ್ದು, ಗ್ರಾಮ ವಿಕಾಸ ಸಮಿತಿ ಹಾಗೂ ಮಂಗಳೂರಿನ ವೆನ್ಲಾಕ್ ಬ್ಲಡ್ ಬ್ಯಾಂಕ್ ಸಂಸ್ಥೆಗಳು ಕಾರ್ಯಕ್ರಮಕ್ಕೆ ಸಹಯೋಗ ನೀಡಿವೆ.

Leave a Reply

Your email address will not be published. Required fields are marked *