ಮುಂಬೈ : ಹಿರಿಯ ಬಾಲಿವುಡ್ ನಟ ಧರ್ಮೇಂದ್ರ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಕಳೆದ ವಾರ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಹಲವು ದಿನಗಳಿಂದ ಐಸಿಯುನಲ್ಲಿ ಇರಿಸ ಚಿಕಿತ್ಸೆ ನೀಡಲಾಗ್ತಿದ್ದು, ಆದಾಗ್ಯೂ, ಇಂದು ಬೆಳಿಗ್ಗೆ ಅವರ ಸ್ಥಿತಿ ಹದಗೆಟ್ಟಿದೆ.

ಸಧ್ಯ ಅವರನ್ನು ವೆಂಟಿಲೇಟರ್’ಗೆ ವರ್ಗಾಯಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವರದಿಗಳ ಪ್ರಕಾರ, ಧರ್ಮೇಂದ್ರ ಅವರ ಆರೋಗ್ಯ ಇಂದು ಹದಗೆಟ್ಟ ನಂತರ ಅವರನ್ನು ವೆಂಟಿಲೇಟರ್‌ನಲ್ಲಿ ಐಸಿಯುಗೆ ಸ್ಥಳಾಂತರಿಸಲಾಗಿದೆ. ಅವರು ಪ್ರಸ್ತುತ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆದಾಗ್ಯೂ, ಕುಟುಂಬ ಅಥವಾ ಆಸ್ಪತ್ರೆಯಿಂದ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಲಾಗಿಲ್ಲ.


