ನಿಡ್ಲೆ:
ಕುದ್ರಾಯ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಡಿಸೆಂಬರ್ 15ರಂದು ಮುಂಜಾನೆ ನಡೆದಿದೆ.

ಮಾಹಿತಿಯಂತೆ, ಹಾಸನದಿಂದ ಧರ್ಮಸ್ಥಳದ ಕಡೆಗೆ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಧರ್ಮಸ್ಥಳದಿಂದ ಕೊಕ್ಕಡದ ಕಡೆಗೆ ತೆರಳುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ಪರಿಣಾಮವಾಗಿ ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರು ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಘಟನೆಯ ಹಿನ್ನೆಲೆಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸ್ಥಳಕ್ಕೆ ಪೊಲೀಸರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಆಗಮಿಸಿ ವಾಹನಗಳನ್ನು ತೆರವುಗೊಳಿಸಿದ ಬಳಿಕ ಸಂಚಾರವನ್ನು ಸರಾಗಗೊಳಿಸಲಾಗಿದೆ. ಸದ್ಯ ರಸ್ತೆ ಸಂಚಾರ ಸಾಮಾನ್ಯ ಸ್ಥಿತಿಗೆ ಬಂದಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *