ಸುಳ್ಯ: ಸುಳ್ಯ ಸಮೀಪದ ದೊಡ್ಡತೋಟ ಬಳಿಯ ಕಾಸಿನಗೋಡ್ಲು ತಿರುವಿನಲ್ಲಿ ನಿನ್ನೆ ರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.
ಅಪಘಾತದ ಪರಿಣಾಮ ಕಾರಿನ ಮುಂಭಾಗ ಭಾಗಶಃ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.






ಮಾವಿನಕಟ್ಟೆ ಕಡೆಯಿಂದ ಸುಳ್ಯ ಕಡೆಗೆ ಕಾರು ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.


