ಆಲಂಕಾರು: ಪೆರಾಬೆ ಗ್ರಾಮದ ಕೋಚಕಟ್ಟೆ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೊಸ್ಮಠ ದೇರಾಜೆ ನಿವಾಸಿ, ಮೆಸ್ಕಾಂ ಉದ್ಯೋಗಿ ದಯಾನಂದ ಗಾಯಗೊಂಡವರಾಗಿದ್ದಾರೆ. ಇವರ ತಮ್ಮ ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು, ಮುಂದಿದ್ದ ವಾಹನವನ್ನು ಹಿಂದಿಕ್ಕಲು (Overtake) ಪ್ರಯತ್ನಿಸಿದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಕಾರ್ ದಯಾನಂದ ಅವರ ಬೈಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಎಸೆಯಲ್ಪಟ್ಟ ದಯಾನಂದ ಅವರನ್ನು ಸ್ಥಳೀಯರು ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *