ಮಾಣಿ: ಹೋಟೆಲ್ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಮತ್ತೊಂದು ಕಾರು ಬಂದು ಡಿಕ್ಕಿ ಹೊಡೆದ ಘಟನೆ ಮಾಣಿಯಲ್ಲಿ ನಡೆದಿದೆ. ಅಪಘಾತದ ಪರಿಣಾಮ ಒಬ್ಬರಿಗೆ ಗಾಯಗಳಾಗಿದ್ದು, ಗಾಯಾಳುವಿಗೆ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಘಟನೆಯಿಂದಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಹಾನಿಯಾಗಿದೆ. ಅಪಘಾತದ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.








