ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ನಾಗಮಂಡಲೋತ್ಸವ ಸಮಿತಿ ಉಪ್ಪಿನಂಗಡಿ ಇವರ ಆಶ್ರಯದಲ್ಲಿ ಏಪ್ರಿಲ್ 5ರಂದು ನಡೆಯಲಿರುವ ನಾಗಮಂಡಲೋತ್ಸವ ಮಹೋತ್ಸವದ ಅಂಗವಾಗಿ ಚಪ್ಪರ ಮಹೂರ್ತ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.
ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಮುಂಭಾಗದಲ್ಲಿ ಮಾರ್ಚ್ 25, 2026ರಂದು ಬೆಳಗ್ಗೆ 7 ಗಂಟೆಗೆ ಚಪ್ಪರ ಮಹೂರ್ತ ನಡೆಯಿತು. ಈ ಸಂದರ್ಭದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.





ನಾಗಮಂಡಲೋತ್ಸವವು ಏಪ್ರಿಲ್ 5ರಂದು ವಿಜೃಂಭಣೆಯಿಂದ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೈವದ ಆಶೀರ್ವಾದ ಪಡೆಯುವಂತೆ ಸಮಿತಿಯವರು ಮನವಿ ಮಾಡಿದ್ದಾರೆ.




