ಬೆಳ್ತಂಗಡಿ: ತಾಲೂಕಿನ ಬಳಂಜಾ ಗ್ರಾಮದ ಪರಾರಿ ಪ್ರದೇಶದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಶಾಲಾ ಮಕ್ಕಳನ್ನು ಅಪಾಯಕಾರಿ ರೀತಿಯಲ್ಲಿ ಸಾಗಿಸಿದ ಘಟನೆ ಬೆಳಕಿಗೆ ಬಂದಿದೆ.
ಫೆಬ್ರವರಿ 9, 2026ರಂದು ಬಳಂಜಾ 400 ಸಾರ್ವಜನಿಕರ ರಸ್ತೆಯಲ್ಲಿ ಬಳಂಜಾ ಕಡೆಯಿಂದ ಟಿಪ್ಪರ್ ಲಾರಿ (KA-70-2596) ಹಾಗೂ ಪಿಕಪ್ ವಾಹನ (KA-21A-8776)ಗಳಲ್ಲಿ ಶಾಲಾ ಮಕ್ಕಳನ್ನು ತುಂಬಿಸಿಕೊಂಡು 400 ಗ್ರಾಮದ ನರ್ಸರಿಗೆ ಅಧ್ಯಯನ ಪ್ರವಾಸಕ್ಕಾಗಿ ಕರೆದೊಯ್ಯಲಾಗಿತ್ತು ಎಂದು ತಿಳಿದುಬಂದಿದೆ.




ಈ ಕುರಿತು ಬಳಂಜಾ ಗ್ರಾಮದ ನಿವಾಸಿ ಧರನೇಂದ್ರ ಅವರು ನೀಡಿದ ದೂರಿನ ಮೇರೆಗೆ ವೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.ಕ್ರ. 14/2026 ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 281 ಹಾಗೂ ಐಎಂವಿ ಕಾಯ್ದೆಯ ಕಲಂ 66 ಜೊತೆಗೆ 192(ಎ) ಅಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.



ಶಾಲಾ ಮಕ್ಕಳನ್ನು ನಿಯಮಬಾಹಿರ ಹಾಗೂ ಅಪಾಯಕಾರಿ ರೀತಿಯಲ್ಲಿ ಸರಕು ಸಾಗಾಣಿಕೆ ವಾಹನಗಳಲ್ಲಿ ಸಾಗಿಸಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಶಾಲಾ ಆಡಳಿತ ಮಂಡಳಿಯ ವಿರುದ್ಧ ಪರಿಶೀಲನೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ಹರಿಸಬೇಕೆಂಬ ಆಗ್ರಹ ವ್ಯಕ್ತವಾಗಿದೆ.



