ಕಡಬ, ಫೆ.10: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದ ಗಾನದ ಕೊಟ್ಯದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಬಂದ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ.

ದಾಳಿಯ ವೇಳೆ ಕೆಲವರು ಕೋಳಿಗಳ ಕಾಲಿಗೆ ಬಾಳ್ ಕತ್ತಿ ಕಟ್ಟಿ ಹಣವನ್ನು ಪಣಕ್ಕಿಟ್ಟು ಜೂಜಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಆಗಮಿಸುತ್ತಿದ್ದಂತೆಯೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಉಮೇಶಗೌಡ (ಬಂಟ್ರ ಗ್ರಾಮ) ಹಾಗೂ ವಿನಯ ಸಿ (ಐತ್ತೂರು ಗ್ರಾಮ) ಸೇರಿದಂತೆ ಇತರರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ.16/2026 ದಾಖಲಿಸಲಾಗಿದ್ದು, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87, 93 ಮತ್ತು ಪ್ರಾಣಿ ಹಿಂಸೆ ತಡೆ ಕಾಯ್ದೆ ಕಲಂ 3, 11ರಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

Leave a Reply

Your email address will not be published. Required fields are marked *