ಮಂಗಳೂರು: ನೂರಾರು ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಪೂರ್ಣ ವರದಿಯನ್ನು ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ.

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ ನ.20 ರಂದು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ತನಿಖಾ ಪ್ರಾಥಮಿಕ ವರದಿ ಸಲ್ಲಿಸಿತ್ತು.

ಇಂದು ನಡೆದ ವಿಚಾರಣೆ ವೇಳೆ ಆದಷ್ಟು ಶೀಘ್ರವಾಗಿ ತನಿಖೆ ನಡೆಸಿ ಅಂತಿಮ ವರದಿಯನ್ನು ಸಲ್ಲಿಸಬೇಕೆಂದು ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಹೆಚ್‌ಟಿ ಆದೇಶಿಸಿ ಜ. 23ಕ್ಕೆ ಮುಂದಿನ ವಿಚಾರಣೆಯನ್ನು ಮುಂದೂಡಿದರು.

Leave a Reply

Your email address will not be published. Required fields are marked *