ವಿಟ್ಲ: ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆ.ಕ್ರ. ಸಂಖ್ಯೆ 181/2019 ಪ್ರಕರಣದಲ್ಲಿ ಆರೋಪಿಯಾಗಿರುವ ಮಂಜೇಶ್ವರ ನಿವಾಸಿ ಮಹಮ್ಮದ್ ಫಯಾಸ್ (33) ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸರು ಆರೋಪಿಯ ಬಂಧನಕ್ಕೆ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.

ದಿನಾಂಕ 24-03-2026ರಂದು ಮಂಜೇಶ್ವರದ ಬಾಯಾರು ಪದವು ಪ್ರದೇಶದಲ್ಲಿ ಎಎಸ್ಐ ಜಯರಾಮ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್‌ಸಿ ಶ್ರೀಕುಮಾರ, ಪಿಸಿ ಗೋಪಾಲಕೃಷ್ಣ, ಪಿಸಿ ಮಾಯಪ್ಪ ಹಾಗೂ ಪಿಸಿ ವೆಂಕಟಪ್ಪ ಅವರ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ.
ಬಂಧಿತನನ್ನು ನಂತರ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *