ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯರಾದ H. D. Deve Gowda ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ Kukke Subramanya Templeಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಮಾರ್ಚ್ 1ರಂದು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿದ ದೇವೇಗೌಡರು ಕಡಬ ತಾಲೂಕಿನ ಬಿಳಿನೆಲೆ ಹೆಲಿಪ್ಯಾಡ್‌ನಲ್ಲಿ ಇಳಿದು, ಅಲ್ಲಿಂದ ರಸ್ತೆ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ಆಗಮಿಸಿದರು. ಸಂಜೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು, ಇಂದು (ಮಾರ್ಚ್ 2) ಬೆಳಗಿನ ಜಾವ ಆಶ್ಲೇಷ ಬಲಿ ಪೂಜೆಯಲ್ಲಿ ಭಾಗವಹಿಸಿದರು. ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಈ ಸೇವೆಯನ್ನು ಅರ್ಪಿಸಿರುವುದಾಗಿ ತಿಳಿದುಬಂದಿದೆ.

ಮಧ್ಯಾಹ್ನ 2:30ರ ಸುಮಾರಿಗೆ ರಸ್ತೆ ಮಾರ್ಗವಾಗಿ ಬಿಳಿನೆಲೆ ಹೆಲಿಪ್ಯಾಡ್‌ಗೆ ತೆರಳಿ, ಮಧ್ಯಾಹ್ನ 3 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ .ಬೆಳೆಸಲಿದ್ದಾರೆ.

ಮಾಜಿ ಪ್ರಧಾನಿಗಳಿಗೆ ಇರುವ Z+ ಭದ್ರತೆ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪ್ರವಾಸದ ಅವಧಿಯಲ್ಲಿ ಭದ್ರತಾ ಸಿಬ್ಬಂದಿ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರು.
ಈ ಸಂದರ್ಭದಲ್ಲಿ Janata Dal Secular ಪಕ್ಷದ ಜಿಲ್ಲಾ ಅಧ್ಯಕ್ಷರು ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ದೇವಳದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *