ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಕಡಬ ತಾಲ್ಲೂಕು, ಕುಟ್ರುಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಕಳದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿ ನಿರ್ಮಾಣಕ್ಕೆ ಪೂಜ್ಯ ಡಾ| ಡಿ. ವೀರೇಂದ್ರ ಹೆಗಡೆಯವರು ಮಂಜೂರು ಮಾಡಿದ ಸಹಾಯಧನದ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು.





ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ್ ಅವರು, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಪ್ರಸನ್ನ ಹೆಬ್ಬಾರು ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ಸೂಸಮ್ಮ ಮುತ್ತಾಯಿರವರಿಗೆ ಮಂಜೂರಾತಿ ಪತ್ರವನ್ನು ಅಧಿಕೃತವಾಗಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಡಬ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ಪ್ರಕಾಶ್ ಕುಮಾರ್, ಉಡುಪಿ ಪ್ರಾದೇಶಿಕ ಕಚೇರಿ ಯೋಜನಾಧಿಕಾರಿಗಳಾದ ಶ್ರೀ ಜಯಂತ್ ನಾಯ್ಕ್, ಶಾಲಾ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷರಾದ ಶ್ರೀ ಸುಧಾಕರ್ ಪಿ., ವಲಯ ಮೇಲ್ವಿಚಾರಕರಾದ ವಿಜೇಶ್ ಜೈನ್, ಎಸ್.ಡಿ.ಎಂ.ಸಿ ಸದಸ್ಯರಾದ ಚಿದಾನಂದ ಎ.ಎಸ್., ಶ್ರೀಮತಿ ಶ್ರುತಿ, ಸಂತೋಷ್, ಅಂಗನವಾಡಿ ಶಿಕ್ಷಕಿ ಶ್ರೀಮತಿ ಮೇರಿ ಎನ್.ಎ. ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.




