ಬೆಳಗಾವಿ : ಬಿ.ಪಿ.ಎಲ್ ಕಾರ್ಡ್ ಹಾಗೂ 30 ಸಾವಿರಕ್ಕಿಂತ ಹೆಚ್ಚಿನ ಆದಾಯ ಹೊಂದಿರುವವರಿಗೆ ವೃದ್ದಾಪ್ಯ ವೇತನ ಹಾಗೂ ಸಂಧ್ಯಾ ಸುರಕ್ಷಾ ಯೋಜನೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್ ನಲ್ಲಿ ಅವಕಾಶ ಕಲ್ಪಿಸುವ ಕುರಿತು ಡಾ. ವೈ ಭರತ್ ಶೆಟ್ಟಿಯವರು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ, ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡರ ಮತ್ತು ಸರಕಾರದ ಗಮನ ಸೆಳೆದರು.

ಸಂಧ್ಯಾ ಸುರಕ್ಷಾ ಯೋಜನೆಗೆ ಈಗಾಗಲೇ ಇರುವ ಆದಾಯ ಮಿತಿಯನ್ನು ಹೆಚ್ಚಿಸಿ, ಸಾಧ್ಯವಾದರೆ ಬಿ. ಪಿ. ಎಲ್ ಕಾರ್ಡ್ ಹೊಂದಿರುವ ಎಲ್ಲರಿಗೂ ಯೋಜನೆಯ ಅವಕಾಶ ದೊರೆಯುವಂತೆ ಮಾಡಿಕೊಡಬೇಕು ಎಂದು ಸರಕಾರಕ್ಕೆ ಸಲಹೆ ನೀಡಿದರು.

Leave a Reply

Your email address will not be published. Required fields are marked *