ಪುತ್ತೂರು: ಮಾದಕ ವಸ್ತು ಸೇವನೆ ಮಾಡಿದ ಪ್ರಕರಣದಲ್ಲಿ ನರಿವುಗರು ನಿವಾಸಿ ಅರ್ಫಾಜ್ (25) ಎಂಬ ಯುವಕನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್‌ಐ ಸೇಸಮ್ಮ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ನರಿಮೊಗರು ಗ್ರಾಮದ ಪುರುಷರ ಕಟ್ಟೆ ಎಂಬ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ಯುವಕರು ಅನುಚಿತವಾಗಿ ವರ್ತಿಸುತ್ತಿರುವ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದರು. ಪೊಲೀಸರು ಹೋದನ್ನು ಕಂಡು ಇಬ್ಬರೂ ಓಡಿ ಹೋಗಲು ಪ್ರಯತ್ನಿಸಿದ್ದು,ಒಬ್ಬನಾದ ಅರ್ಫಾಜ್ ನಶೆಯ ಸ್ಥಿತಿಯಲ್ಲಿ ಇದ್ದುದನ್ನು ಪೊಲೀಸರು ಪತ್ತೆಹಚ್ಚಿದರು.

ನಶೆಯಲ್ಲಿದ್ದವರನ್ನು ಹಿಡಿದು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳ ಮುಂದೆ ಹಾಜರುಪಡಿಸಿದಾಗ ಅರ್ಫಾಜ್ ಎಂಬಾತ ಮಾದಕ ವಸ್ತು ಸೇವನೆ ಮಾಡಿರುವುದು ದೃಢ ಪಟ್ಟಿದ್ದರಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *