ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 2026ನೇ ಸಾಲಿನ ವಾರ್ಷಿಕ ಜಾತ್ರೋತ್ಸವವು ಏಪ್ರಿಲ್ 10ರಿಂದ ಏಪ್ರಿಲ್ 20ರವರೆಗೆ ನಡೆಯಲಿದ್ದು, ಜಾತ್ರೋತ್ಸವವನ್ನು ಶಾಂತಿಯುತವಾಗಿ ಹಾಗೂ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಮಹತ್ವದ ಮನವಿ ಹೊರಬಂದಿದೆ.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಈಶ್ವರ ಭಟ್ ಪಂಜಿಗುಡ್ಡೆ ಅವರು, ವಕೀಲರ ಸಂಘದ ಅಧ್ಯಕ್ಷರಿಗೆ ಮನವಿ ಸಲ್ಲಿಸಿ, ಜಾತ್ರೋತ್ಸವ ಅವಧಿಯಲ್ಲಿ ದೇವಳದ ವಠಾರದಲ್ಲಿ ಯಾವುದೇ ಗಲಾಟೆ, ಕಳ್ಳತನ ಅಥವಾ ಅಹಿತಕರ ಘಟನೆಗಳಿಗೆ ಸಂಬಂಧಿಸಿ ಬಂಧನಕ್ಕೊಳಗಾದ ಆರೋಪಿಗಳಿಗೆ ಜಾಮೀನು ಮಂಜೂರು ಮಾಡುವ ವಿಚಾರದಲ್ಲಿ ವಾದ ಮಂಡಿಸದಂತೆ ವಿನಂತಿಸಿದ್ದಾರೆ









