ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಸಮಿತಿಯ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರ್ ಮತ್ತು ಪ್ರಜ್ವಲ್ ಕೋಟ್ಯಾನ್, ಕೋಷಾಧಿಕಾರಿಯಾಗಿ ಅಶ್ವಿನಿ ಪರುವಾಯಿ, ಸಹ ಕಾರ್ಯದರ್ಶಿಯಾಗಿ ಸುಮನ್ ಕೇಪು ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ ಮಹಲ್ ಸಭಾಂಗಣದಲ್ಲಿ ಜರುಗಿತು. ಸಭೆಗೆ ಜಿಲ್ಲಾಧ್ಯಕ್ಷ ತಾರನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.




ಕಾರ್ಯಕ್ರಮದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು, ದಕ್ಷಿಣ ಕನ್ನಡ ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ಯಾನುಟ್ ಜೆ. ಪಿಂಟೋ, ಪುತ್ತೂರು ತಾಲೂಕು ಅಧ್ಯಕ್ಷ ರಾಮದಾಸ್ ಶೆಟ್ಟಿ, ಸುಳ್ಯ ತಾಲೂಕು ಅಧ್ಯಕ್ಷ ಯಶ್ವಿತ್ ಕಾಳಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ಮುಂದಿನ 2 ವರ್ಷಗಳ ಅವಧಿಗೆ ಜಿಲ್ಲಾ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಆಯ್ಕೆ ಪ್ರಕೃಯೆ ನಡೆಸಲಾಯಿತು. ಬಳಿಕ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ಘಟಕದ ಅಧ್ಯಕ್ಷರು ರಾಮ್ದಾಸ್ ಶೆಟ್ಟಿಯವರು ತಾಲೂಕು ಉಪಾಧ್ಯಕ್ಷರನ್ನಾಗಿ ಅಕ್ಕರೆ ನ್ಯೂಸ್ ಸಂಸ್ಥಾಪಕ ಜಯಪ್ರಕಾಶ್ ಕೆ ಬದಿನಾರು ಹಾಗೂ ಪ್ರಜ್ವಲ್ ಕೋಟ್ಯಾನ್ (ಕಹಳೆ ನ್ಯೂಸ್) , ಜತೆಕಾರ್ಯದರ್ಶಿಯಾಗಿ ಸುಮನಾ ಕೇಪು (ಕಹಳೆ ನ್ಯೂಸ್) , ಕೋಶಾಧಿಕಾರಿಯಾಗಿ ಅಶ್ವಿನಿ ಪೆರುವಾಯಿ (ವಿಟಿವಿ ನ್ಯೂಸ್ )ರವರನ್ನು ನೇಮಕ ಮಾಡಿದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ನೂತನ ಅಧ್ಯಕ್ಷರಾದ ಈಶ್ವರ್ ವಾರಣಾಶಿ ಸೇರಿದಂತೆ ಜಿಲ್ಲೆ ಹಾಗೂ ತಾಲೂಕಿನ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.



