ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಏಪ್ರಿಲ್ 30ರಂದು ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕ್ಯಾಂಪ್ಕೋ ಫ್ಯಾಕ್ಟರಿ, ಕೆಮ್ಮಿಂಜೆ ಮತ್ತು ಮುಕ್ರಂಪಾಡಿ ಫೀಡರ್ಗಳಲ್ಲಿ ಬೆಳಿಗ್ಗೆ 9:30ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಕ್ಯಾಂಪ್ಕೋ ಫ್ಯಾಕ್ಟರಿ, ಕೆಮ್ಮಿಂಜೆ, ದರ್ಬೆ, ಮುಕ್ರಂಪಾಡಿ, ಕೂರ್ನಡ್ಕ ಮತ್ತು ಸಂಪ್ಯ ಪ್ರದೇಶಗಳ ವಿದ್ಯುತ್ ಬಳಕೆದಾರರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.






