ಜೈಪುರ: ಇಲ್ಲಿನ ಭಿವಾಡಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಇಂದು ಬೆಳಿಗ್ಗೆ 9:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಕಾರ್ಖಾನೆಯಲ್ಲಿ 20ರಿಂದ 25 ಜನ ಕಾರ್ಮಿಕರಿದ್ದರು. ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ಕಾರ್ಖಾನೆಯ ತುಂಬೆಲ್ಲಾ ಆವರಿಸಿಕೊಂಡಿದ್ದು, ಕೆಲವು ಕಾರ್ಮಿಕರು ಹೊರಗೆ ಓಡಿಬಂದು ಪ್ರಾಣವನ್ನು ಉಳಿಸಿಕೊಂಡಿದ್ದಾರೆ ಎಂದು ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ.

ಈ ಕುರಿತು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಮಿತಾ ಮಿಶ್ರಾ ಮಾತನಾಡಿ, ಈ ಪ್ರದೇಶದಲ್ಲಿ ಪೊಲೀಸರು ದಿನನಿತ್ಯ ಗಸ್ತು ತಿರುಗುತ್ತಾರೆ. ಅದರಂತೆ ಇಂದು ಗಸ್ತು ತಿರುಗುವಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ವೈದ್ಯಕೀಯ ತಂಡ ದೌಡಾಯಿಸಿವೆ. ಸುಮಾರು ಒಂದೂವರೆ ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.

Leave a Reply

Your email address will not be published. Required fields are marked *