ಕಡಬ: ಸೋಮವಾರದಂದು ಸರಸ್ವತಿ ವಿದ್ಯಾಲಯ ಪ್ರಾಥಮಿಕ ಶಾಲೆ, ವಿದ್ಯಾನಗರದಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣವನ್ನು ಕಲೆ ಮತ್ತು ಸಂಸ್ಕೃತಿ ಪ್ರಕೋಷ್ಠ, ದಕ್ಷಿಣ ಕನ್ನಡದ ಕಾರ್ಯಕಾರಿಣಿ ಸದಸ್ಯರು ಹಾಗೂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೋಹಿತ್ ಸುಳ್ಯ ಅವರು ನೆರವೇರಿಸಿದರು. ಬಳಿಕ ರಾಷ್ಟ್ರಗೀತೆ ಹಾಡುವ ಮೂಲಕ ದೇಶಭಕ್ತಿಯ ವಾತಾವರಣ ನಿರ್ಮಾಣವಾಯಿತು.

ಈ ಸಂದರ್ಭದಲ್ಲಿ ವಿದ್ಯಾಲಯದ ನಿರ್ದೇಶಕರಾದ ಪ್ರಮೀಳಾ ಲೋಕೇಶ್ ಅವರು, ಪ್ರಾಥಮಿಕ ವಿಭಾಗದ ಮುಖ್ಯ ಗುರುಗಳಾದ ಮಾಧವ ಶ್ರೀಮಾನ್ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಘನತೆ ತುಂಬಿದರು.
ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು ಹಾಗೂ ಸಂವಿಧಾನದ ಮಹತ್ವವನ್ನು ಸಾರುವ ಕಾರ್ಯಕ್ರಮಗಳು ನಡೆಯಿತು.

Leave a Reply

Your email address will not be published. Required fields are marked *