ಪುತ್ತೂರು: ಕರ್ನಾಟಕ ರಾಜ್ಯದ ಮೂರನೇ ಅತಿ ಎತ್ತರದ ಹಾಗೂ ತಾಲ್ಲೂಕು ಕೇಂದ್ರಗಳಲ್ಲೇ ಪ್ರಥಮ ಎತ್ತರದ ರಾಷ್ಟ್ರಧ್ವಜಸ್ತಂಭವನ್ನು ಪುತ್ತೂರಿನ ನೆಲ್ಯಕಟ್ಟೆಯಲ್ಲಿ ನಿರ್ಮಿಸಲಾಗಿದ್ದು, ಫೆ.17ರಂದು ಅದ್ಧೂರಿಯಾಗಿ ಉದ್ಘಾಟನೆ ಹಾಗೂ ತ್ರಿವರ್ಣ ಧ್ವಜಾರೋಹಣ ನಡೆಯಿತು.

ಧ್ವಜಸ್ತಂಭಕ್ಕೆ ಶಿಲಾನ್ಯಾಸಗೊಂಡು 76 ದಿನಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿರುವುದು ವಿಶೇಷವಾಗಿದೆ.
ಸಂತ ಫಿಲೋಮಿನಾ ಲಿಟಲ್ ಫ್ಲವರ್ ವಿವೇಕಾನಂದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹೈಗೋ ರಾಮಕೃಷ್ಣ ಪದ್ಧತಿಯ ಎನ್‌ಸಿಸಿ, ಸ್ಕೌಟ್ಸ್ ಹಾಗೂ ಗೈಡ್ಸ್ ಸಹಕಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು. ಆಕರ್ಷಕ ಪಥ ಸಂಚಲನ, ಬ್ಯಾಂಡ್ ವಾದ್ಯಗಳೊಂದಿಗೆ ನೆಲ್ಯಕಟ್ಟೆ ಧ್ವಜಸ್ತಂಭದ ಬಳಿಗೆ ಬಂದು ಶಾಸಕರ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ, ನಗರಸಭೆ ಅಧ್ಯಕ್ಷೆ ಲ್ಯಾನ್ಸಿ ಮಸ್ಕರೇನಸ್, ನಿವಾಳ್ ಪಿ ಶೆಟ್ಟಿ, ಅನ್ವರ್ ಖಾಸಿಂ, ನಗರಸಭಾ ಸದಸ್ಯರು, ಗುರುಪ್ರಸಾದ್ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *