ಚಿತ್ತಾಪುರ: ನವೆಂಬರ್ 16ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ ಕಲಬುರ್ಗಿ ವಿಭಾಗೀಯ ಪೀಠದಲ್ಲಿ ಗುರುವಾರ ಮಧ್ಯಾಹ್ನ ನಡೆದಿತು.

ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ಎರಡೂ ಪಾರ್ಶ್ವಗಳ ವಾದ–ಪ್ರತಿವಾದ ಆಲಿಸಿದ ನಂತರ ನ್ಯಾಯಪೀಠವು ನ.16ರಂದು ಮಧ್ಯಾಹ್ನ 3:30ರಿಂದ ಸಂಜೆ 5:45ರವರೆಗೆ ಪಥಸಂಚಲನ ನಡೆಸಲು ಅನುಮತಿ ನೀಡಿದೆ.

ಹೈಕೋರ್ಟ್ ನೀಡಿದ ಈ ಆದೇಶದೊಂದಿಗೆ ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

Leave a Reply

Your email address will not be published. Required fields are marked *