ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಮಾತ್ರ ವಾಹನ ಚಲಾಯಿಸಬೇಕು ಎಂದು ಕಡಬ ಪೊಲೀಸ್ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ.

ರಸ್ತೆ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಕೆ ಅತ್ಯಂತ ಅಗತ್ಯವಾಗಿದ್ದು, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಪಘಾತ ಸಂದರ್ಭದಲ್ಲಿ ಪ್ರಾಣಾಪಾಯ ತಪ್ಪಿಸಲು ಹೆಲ್ಮೆಟ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.
ಸಾರ್ವಜನಿಕರು ತಮ್ಮ ಹಾಗೂ ಇತರರ ಜೀವ ರಕ್ಷಣೆಯ ಹಿತದೃಷ್ಟಿಯಿಂದ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಪೊಲೀಸ್ ಇಲಾಖೆಗೆ ಸಹಕರಿಸಬೇಕೆಂದು ಕಡಬ ಪೊಲೀಸರು ಮನವಿ ಮಾಡಿದ್ದಾರೆ.





