ಕಡಬ:
ಕಡಬ ತಾಲೂಕಿನಲ್ಲಿ ಜ.25ರಿಂದ ಫೆ.1ರವರೆಗೆ ಹಿಂದು ಸಂಗಮವನ್ನು ಆಯೋಜಿಸಲಾಗಿದೆ. ಹಿಂದು ಸಂಗಮ ಆಯೋಜನಾ ಸಮಿತಿ ವತಿಯಿಂದ ನಡೆಯುವ ಈ ಕಾರ್ಯಕ್ರಮವು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಚಟುವಟಿಕೆಗಳೊಂದಿಗೆ ಜರುಗಲಿದೆ.
ಕಾರ್ಯಕ್ರಮದ ಅಂಗವಾಗಿ ಜ.25ರಂದು ಕಳಿವ ಕೇಶವ ತೀರ್ಥ ಕ್ಷೇತ್ರದಲ್ಲಿ ಪೂಜಾ ಕಾರ್ಯಕ್ರಮದೊಂದಿಗೆ ಹಿಂದು ಸಂಗಮಕ್ಕೆ ಚಾಲನೆ ನೀಡಲಾಗುವುದು. ನಂತರ ದಿನಗಳಲ್ಲಿ ತಾಲೂಕಿನ ವಿವಿಧ ಭಾಗಗಳಲ್ಲಿ ಸಭೆಗಳು, ಉಪನ್ಯಾಸಗಳು, ಭಜನಾ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.





ಹಿಂದು ಸಮಾಜದ ಏಕತೆ, ಸಂಸ್ಕೃತಿ ಮತ್ತು ಧಾರ್ಮಿಕ ಮೌಲ್ಯಗಳ ಜಾಗೃತಿಯೇ ಈ ಸಂಗಮದ ಮುಖ್ಯ ಉದ್ದೇಶವಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಸಮಾಜದಲ್ಲಿ ಧರ್ಮ, ಸಂಸ್ಕೃತಿ ಮತ್ತು ಪರಂಪರೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ವಿವಿಧ ಗಣ್ಯರ ಉಪನ್ಯಾಸಗಳು, ಚರ್ಚೆಗಳು ನಡೆಯಲಿವೆ.
ಫೆ.1ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಈ ಸಂದರ್ಭದಲ್ಲಿ ವಿವಿಧ ಧಾರ್ಮಿಕ ನಾಯಕರು, ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ. ತಾಲೂಕಿನ ಹಿಂದು ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜನಾ ಸಮಿತಿ ಮನವಿ ಮಾಡಿದೆ.




