ಪುತ್ತೂರು: ಮುಖ್ಯರಸ್ತೆ ಭಾಗದ ಎಂ. ಸಂಜೀವ ಶೆಟ್ಟಿ ಜವಳಿ ಅಂಗಡಿ ಬಳಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಹಿಟ್ ಅಂಡ್ ರನ್ ಪ್ರಕರಣ ಪುತ್ತೂರು ನಗರದಲ್ಲಿ ನಡೆದಿದೆ. ಜನವರಿ 28ರಂದು ರಾತ್ರಿ ವೇಳೆ ಈ ದುರ್ಘಟನೆ ಸಂಭವಿಸಿದೆ.





ಪುತ್ತೂರಿನ ಸಂಜೀವಶೆಟ್ಟಿ ಜವಳಿ ಅಂಗಡಿ ಭಾಗದಲ್ಲಿ ಬೈಕ್ ಸವಾರನಿಗೆ ಅಪರಿಚಿತ ವೇಗದ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಪರಿಣಾಮವಾಗಿ ಸವಾರ ರಸ್ತೆ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.


ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ರಕರಣದ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪರಾರಿಯಾದ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಗರದಲ್ಲಿ ಹಿಟ್ ಅಂಡ್ ರನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.


