ಕಡಬ:
ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಅವರ ಆದೇಶದಂತೆ ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಹಿರಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು.

ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಫೈಜಲ್ ಕಡಬ ಅವರ ನೇತೃತ್ವದಲ್ಲಿ, ಕಾಂಗ್ರೆಸ್ ಪಕ್ಷದ ಸಂಘಟನೆಗೆ ಅಪಾರ ಕೊಡುಗೆ ನೀಡಿದ್ದು, ದೀರ್ಘಕಾಲ ನಿಷ್ಠೆಯಿಂದ ಸೇವೆ ಸಲ್ಲಿಸಿರುವ ಹಿರಿಯ ಮುಖಂಡರಾದ ಸುಬ್ರಯ್ಯ ಹೆಬ್ಬಾರ್ ಹೊಸಮಠ (55 ವರ್ಷಗಳ ಸೇವೆ) ಹಾಗೂ ಇಚ್ಲಂಪಾಡಿ ಸಿ. ಜಾರ್ಜ್ ಕುಟ್ಟಿ ಉಪದೇಶಿ (62 ವರ್ಷಗಳ ಸೇವೆ) ಅವರನ್ನು ಅವರ ಮನೆಗಳಿಗೆ ತೆರಳಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ., ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಥಾಮಸ್ ಈಡಿಯಲ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಅಬ್ರಹಾಂ ವರ್ಗೀಸ್ (ಇಚ್ಲಂಪಾಡಿ), ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಲೀಲ್ ಕಲಾರ್, ಸುಕೇಶ್ ಹೆಬ್ಬಾರ್, ಜಿಯಾದ್ ಕಲಾರ್, ಸಾಹಿಲ್ ಕಡಬ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾಂಗ್ರೆಸ್ ಪಕ್ಷದ ತತ್ವ, ಆದರ್ಶ ಹಾಗೂ ಸಂಘಟನೆಗೆ ಹಿರಿಯರ ಸೇವೆಯನ್ನು ಸ್ಮರಿಸಿ, ಮುಂದಿನ ಪೀಳಿಗೆಗೆ ಪ್ರೇರಣೆಯಾಗಿ ಇಂತಹ ಗೌರವ ಕಾರ್ಯಕ್ರಮಗಳು ಅಗತ್ಯವೆಂದು ಈ ಸಂದರ್ಭದಲ್ಲಿ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *