ಪುತ್ತೂರು : ದಾಂಪತ್ಯ ಕಲಹ ದುರಂತ ಅಂತ್ಯಗೊಂಡ ಘಟನೆ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಮಾರ್ಚ್ 20ರಂದು ಬೆಳಿಗ್ಗೆ ನಡೆದಿದೆ. ಗಂಡ-ಹೆಂಡತಿಯ ನಡುವೆ ನಡೆದ ಜಗಳವು ಭೀಕರ ತಿರುವು ಪಡೆದು, ಹೆಂಡತಿ ಹತ್ಯೆಯಾಗಿದ್ದು ಬಳಿಕ ಗಂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.

ಘಟನೆಯ ಕುರಿತು ಮಾಹಿತಿ ತಿಳಿದ ತಕ್ಷಣ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *