ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡಿದ್ದು, ಮಧ್ಯಪ್ರಾಚ್ಯದ ಏರ್‌ಸ್ಪೇಸ್‌ಗೆ ನಿರ್ಬಂಧ ವಿಧಿಸಲಾಗಿದೆ. ಪರಿಣಾಮವಾಗಿ ಬೆಂಗಳೂರಿಗೆ  ಆಗಮಿಸಬೇಕಿದ್ದ 9 ಮತ್ತು ನಿರ್ಗಮಿಸಬೇಕಿದ್ದ 10 ವಿಮಾನಗಳ ಹಾರಾಟ ರದ್ದಾಗಿದೆ.

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಲ ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ, ದೋಹಾ ಮಾರ್ಗಗಳ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ.

ಏರ್‌ಸ್ಪೇಸ್ ನಿರ್ಬಂಧ ಮತ್ತು ಭದ್ರತಾ ಕಾರಣದಿಂದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ವಿಮಾನ ವೇಳಾಪಟ್ಟಿಯನ್ನು ಪರಿಶೀಲಿಸಲು ವಿಮಾನ ನಿಲ್ದಾಣ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದರಿಂದ ಮಧ್ಯಪ್ರಾಚ್ಯಕ್ಕೆ ಹೋಗುವ ಪ್ರಯಾಣಿಕರಿಗೆ ತಾತ್ಕಾಲಿಕ ತೊಂದರೆ ಉಂಟಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *