ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿವೃತ್ತ ಕಚೇರಿ ವ್ಯವಸ್ಥಾಪಕ ಜಗದೀಶ್. ಪಿ (72) ಅವರು ಜನವರಿ 6ರ ರಾತ್ರಿ ನಿಧನರಾದರು.


ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಜಗದೀಶ್ ಪಿ ಅವರು ವಿವಿಧ ಹುದ್ದೆಗಳನ್ನು ಅಲಂಕರಿಸಿ ಕರ್ತವ್ಯ ನಿರ್ವಹಿಸಿದ್ದರು. ನಿವೃತ್ತಿಯ ನಂತರ ಸಾಮೆತ್ತಡ್ಕದಲ್ಲಿ ವಾಸ್ತವ್ಯ ಹೊಂದಿದ್ದರು. ಇತ್ತೀಚೆಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.
ಮೃತರು ಪತ್ನಿ ಸುಧಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಜಗದೀಶ್ ಪಿ ಅವರ ನಿಧನಕ್ಕೆ ದೇವಸ್ಥಾನ ಆಡಳಿತ ಮಂಡಳಿ, ಸಹೋದ್ಯೋಗಿಗಳು ಹಾಗೂ ಭಕ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.







