ಪುತ್ತೂರು : ಪುತ್ತೂರು ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿ ಜೀಪು ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬೆಳಿಗ್ಗೆ ನಡೆದಿದೆ.
ಡಿಕ್ಕಿಯ ಪರಿಣಾಮ ಎರಡು ವಾಹನಗಳು ಹಾನಿಗೊಳಗಾಗಿವೆ. ಮಾಹಿತಿ ದೊರಕುತ್ತಿದ್ದಂತೆಯೇ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯ ಕಾರಣ ತಿಳಿದುಬಂದಿಲ್ಲ; ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.







