ಕಾಸರಗೋಡು: ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ ಮಾರ್ಚ್ 28ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ಜರಗಲಿದೆ. ಅಪರಾಹ್ನ 2.30ಕ್ಕೆ ಚುಟುಕು ಸಾಹಿತ್ಯ ಪರಿಷತ್ ಕೇಂದ್ರಸಮಿತಿ ಪ್ರಧಾನ ಸಂಚಾಲಕ ಡಾ. ಎಂ.ಜಿ.ಆರ್ ಅರಸ್ ಮೈಸೂರು ಉದ್ಘಾಟಿಸುವರು.ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸುವರು. ರಾಧಾಕೃಷ್ಣ. ಕೆ. ಉಳಿಯತಡ್ಕ ದಿಕ್ಸೂಚಿ ಭಾಷಣ ಮಾಡುವರು. ನಗರ ಸಭಾ ಸದಸ್ಯೆ ಶಾರದಾ.ಬಿ, ಸಾಹಿತಿ ಹರೀಶ್ ಸುಲಾಯ ಒಡ್ಡಂಬೆಟ್ಟು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಕಾಸರಗೋಡು- ಕರ್ನಾಟಕ ಚುಟುಕು ವಾಚನ ಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಕವಿ ವೆಂಕಟಭಟ್ ಎಡನೀರು ವಹಿಸುವರು. ಸಾಹಿತಿ ಗುಣಾಜೆ ರಾಮಚಂದ್ರಭಟ್ ಮತ್ತು ಡಾ. ವಾಣಿಶ್ರೀ ಕಾಸರಗೋಡು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಾಸರಗೋಡು ಮತ್ತು ಕರ್ನಾಟಕ ಕವಿಗಳು ಚುಟುಕುಗಳನ್ನು ವಾಚಿಸುವರು. ವಿರಾಜ್ ಅಡೂರು ಕಾರ್ಯಕ್ರಮ ನಿರೂಪಿಸುವರು.

Leave a Reply

Your email address will not be published. Required fields are marked *