ಕಡಬ :ವಿ. ಹಿಂ. ಪ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ಎಫ್ ಐ ಆರ್ ಅನ್ನು ಹೈಕೋರ್ಟ್ ಣ. 12 ರಂದು ವಜಾಗೊಳಿಸಿ ಆದೇಶಿಸಿದೆ.

ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೊಲೀಸರು ತೆರಲಿ ಫೋಟೋ ತೆಗೆಯುತ್ತಿದ್ದ ಘಟನೆಗೆ ಸಂಬಂಧಿಸಿ ಜೂನ್. 4 ರಂದು ಕಡಬ ಠಾಣೆಯ ಮುಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯರವರು ದ್ವೇಷ ಭಾಷಣ ಮಾಡಿದ್ದಾರೆಂದು ಅವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ನವೀನ್ ನೆರಿಯಾ ಅವರು ಖ್ಯಾತ ವಕೀಲ ಅರುಣ್ ಶ್ಯಾಮ್ ಅವರ ಮೂಲಕ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಈ ಬಗ್ಗೆ ವಿಚಾರಣೆ ನಡೆದು ನ. 12 ರಂದು ಹೈಕೋರ್ಟ್ ಅವರ ವಿರುದ್ಧ ದಾಖಲಾಗಿದ್ದ ಎಫ್.ಐ.ಆರ್ ನ್ನು ರದ್ದುಗೊಳಿಸಿ ಆದೇಶಿಸಿದೆ.

Leave a Reply

Your email address will not be published. Required fields are marked *