ಕಡಬ: 2025-2026ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಕಡಬದ ಕ್ನಾನಯಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇಕಡಾ 100% ಫಲಿತಾಂಶ ಸಾಧಿಸಿ ಗಮನಸೆಳೆದಿದೆ.
ಈ ಬಾರಿ ಪರೀಕ್ಷೆಗೆ ಒಟ್ಟು 23 ವಿದ್ಯಾರ್ಥಿಗಳು ಹಾಜರಾಗಿದ್ದು, ಇವರಲ್ಲಿ 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶಾಲೆಯ ವಿದ್ಯಾರ್ಥಿನಿ ಧೃತಿ ರೈ 597 ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾಳೆ.
ಶಾಲೆಯ ಈ ಸಾಧನೆಗೆ ಶಿಕ್ಷಕ ವೃಂದ, ಪೋಷಕರು ಹಾಗೂ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನವೇ ಈ ಸಾಧನೆಗೆ ಕಾರಣವೆಂದು ಅಭಿಪ್ರಾಯಪಟ್ಟಿದ್ದಾರೆ.

Leave a Reply

Your email address will not be published. Required fields are marked *