ಕಡಬ: ಒಕ್ಕಲಿಗ ಗೌಡ ಸೇವಾ ಸಂಘ (ರಿ.), ಕಡಬ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ (574221) ಇದರ ಆಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಮುದಾಯ ಭವನದಲ್ಲಿ ಸಂಘದ ವತಿಯಿಂದ ಸ್ಥಾಪಿಸಲಾದ ಔಷಧಾಲಯದ ಉದ್ಘಾಟನಾ ಸಮಾರಂಭ ಹಾಗೂ ತಾಲೂಕಿನ 42 ಗ್ರಾಮಗಳ ವಾರ್ಷಿಕ ಕ್ರೀಡಾಕೂಟವು ಇಂದು (ಡಿಸೆಂಬರ್ 25, 2025 )ನಡೆಯಲಿದೆ.

ಶ್ರೀ ಶ್ರೀ ಶ್ರೀ ಡಾ. ನಿರ್ಮಾಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯಾನುಗ್ರಹದೊಂದಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಔಷಧಾಲಯವನ್ನು ಅಧಿಕೃತವಾಗಿ ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುತ್ತದೆ. ಜೊತೆಗೆ ತಾಲೂಕಿನ ವಿವಿಧ ಗ್ರಾಮಗಳಿಂದ ಕ್ರೀಡಾಪಟುಗಳು ಪಾಲ್ಗೊಳ್ಳುವ ವಾರ್ಷಿಕ ಕ್ರೀಡಾಕೂಟವು ಸಮುದಾಯದಲ್ಲಿ ಕ್ರೀಡಾ ಮನೋಭಾವನೆ ಹಾಗೂ ಸಹಬಾಳ್ವೆಯನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ.
ಈ ವಿಶೇಷ ಕಾರ್ಯಕ್ರಮದ ನೇರ ಪ್ರಸಾರವನ್ನು ನಮ್ಮ PRIME TV ಮೂಲಕ ವೀಕ್ಷಕರು ಅನುಭವಿಸಬಹುದಾಗಿದೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *