ಕಡಬ: ಐರ್ಲೆಂಡ್‌ನ ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್‌ನಲ್ಲಿ ವಾಸವಾಗಿದ್ದ ಸಾಂಜೋ ಸುನಿಲ್(31) ಅವರ ಮೃತದೇಹ ಇಂದು ಅವರ ಮನೆಯಲ್ಲಿ ಪತ್ತೆಯಾಗಿದೆ. ಕಡಬ ಕುಟ್ರಪಾಡಿ ವಿಮಲಗಿರಿವಾಸಿ ಮೂಲದ ಇವರು ಕಳೆದ ಕೆಲವು ಸಮಯದಿಂದ ಐರ್ಲೆಂಡ್‌ನಲ್ಲಿ ಉದ್ಯೋಗದಲ್ಲಿದ್ದರು.ಸಾಂಜೋ ಅವರ ಸಾವು ನಿಗೂಢವಾಗಿದ್ದು, ಇದು ಆತ್ಮಹತ್ಯೆ ಇರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಆದರೂ, ಸಾವಿನ ನಿಖರ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಐರಿಶ್ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.ಪತಿಯ ಅನಿರೀಕ್ಷಿತ ಸಾವಿನ ಸುದ್ದಿ ಕೇಳಿದ ಸಾಂಜೋ ಅವರ ಪತ್ನಿ ತೀವ್ರ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಅಸ್ವಸ್ಥಗೊಂಡಿದ್ದಾರೆ. ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.





