
ಕಾಸರಗೋಡು: ಚುಟುಕು ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಚುಟುಕು ಕವಿ, ಕವಯತ್ರಿಯರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ,ಮೈಸೂರು ಇದರ ಕೇರಳ ಗಡಿನಾಡ ಘಟಕವಾಗಿ 2000 ದಲ್ಲಿ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಕಳೆದ 26 ವರ್ಷಗಳಿಂದ ರಚನಾತ್ಮಕವಾಗಿ ಚುಟುಕು ಸಾಹಿತ್ಯ ಮತ್ತು ಕನ್ನಡಪರ ಚಟುವಟಿಕೆಗಳನ್ನು ಹಮ್ಮಿಕೊಂಡಿರುತ್ತದೆ. 7 ಬಾರಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ ಹಾಗೂ ಅಖಿಲ ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಕಾಸರಗೋಡಿನಲ್ಲಿ ಸಂಘಟಿಸಿ ಮಹತ್ತರವಾದ ಸಾಹಿತ್ಯ ಸಂಘಟನೆಯನ್ನು ಯಶಸ್ವಿಯಾಗಿ ಪೂರೈಸಿರುತ್ತದೆ





ಎಂದು ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ಹೇಳಿದರು.
ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ. ),ಕನ್ನಡ ಗ್ರಾಮ, ಕಾಸರಗೋಡು ಇದರ ಸಹಯೋಗದಲ್ಲಿ ಕರ್ನಾಟಕ ಸರಕಾರ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮ (ಕಾಸರಗೋಡು ಗೋ – ಕುಟೀರ)ದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, 2026 -ಕಾಸರಗೋಡು -ಕರ್ನಾಟಕ ಚುಟುಕು ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕಾಸರಗೋಡಿನ ಧಾರ್ಮಿಕ ಸಾಂಸ್ಕೃತಿಕ ಮುಂದಾಳುಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ದೀಪ ಬೆಳಗಿಸಿದರು. ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು.


ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಮೈಸೂರು ಇದರ ಸಂಸ್ಥಾಪಕ ಪ್ರಧಾನ ಸಂಚಾಲಕ ಡಾ. ಎಂ. ಜಿ. ಆರ್. ಅರಸ್ ಅವರು ವಿಶೇಷ ಅನುದಾನ ನೀಡಿ ಶೀಘ್ರದಲ್ಲೇ ಪ್ರಥಮ ಕೇರಳ ರಾಜ್ಯ ಚುಟುಕು ಸಾಹಿತ್ಯ ಸಮ್ಮೇಳನ ಹಾಗೂ ಕಾಸರಗೋಡು ಜಿಲ್ಲಾ 8 ನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಕಾಸರಗೋಡು ಕನ್ನಡ ಗ್ರಾಮದಲ್ಲಿ ಏರ್ಪಡಿಸಲಾಗುವುದು.ಕೇರಳ -ಕರ್ನಾಟಕ ರಾಜ್ಯದ 100 ಚುಟುಕು ಕವಿಗಳು ಈ ಸಮ್ಮೇಳನದಲ್ಲಿ ಸ್ವರಚಿತ ಚುಟುಕುಗಳನ್ನು ವಾಚಿಸಲಿದ್ದಾರೆ. ಎಂದು ಪ್ರಕಟಣೆಯಲ್ಲಿ ತಿಳಿಸಿ, ಶುಭ ಹಾರೈಸಿದರು. ಪ್ರತಿ ತಿಂಗಳು ಕಾಸರಗೋಡುಜಿಲ್ಲಾ ಚುಟುಕು ಸಾಹಿತ್ಯೋತ್ಸವ ಏರ್ಪಡಿಸಲು ತೀರ್ಮಾನಿಸಲಾಗಿಯೆoದರು. ಕವಿ, ಪತ್ರಕರ್ತ,ರಾಧಾಕೃಷ್ಣ ಕೆ. ಉಳಿಯತ್ತಡ್ಕ ದಿಕ್ಸೂಚಿ ಭಾಷಣ ನೀಡಿದರು.
ಕಾಸರಗೋಡು ನಗರಸಭಾ ಕೌನ್ಸಿಲರ್ ಶಾರದಾ ಬಿ, ಕರ್ನಾಟಕ ಸಮಿತಿ (ರಿ ), ಕಾಸರಗೋಡು ಕಾರ್ಯದರ್ಶಿ, ನ್ಯಾಯವಾದಿ ಕೆ ಸತ್ಯನಾರಾಯಣ ತಂತ್ರಿ, ವೆಂಕಟ್ ಭಟ್ ಎಡನೀರು, ಕವಿಯತ್ರಿ ದಿವ್ಯ ಗಟ್ಟಿ ಪರಕ್ಕಿಲ್ಲ ಮಧೂರು, ಜಯಾನಂದ ಕುಮಾರ್ ಹೊಸದುರ್ಗ ಅತಿಥಿಯಾಗಿ ಪಾಲ್ಗೊಂಡಿದ್ದರು. ಮಾಜಿ ಕೌನ್ಸಿಲರ್ ಶಂಕರ ಜೆ.ಪಿ ನಗರ, ಸ್ವಾಗತಿಸಿದರು . ಪ್ರಧಾನ ಕಾರ್ಯದರ್ಶಿ ಕೆ. ಜಗದೀಶ ಕೂಡ್ಲು ಧನ್ಯವಾದ ವಿತ್ತರು ಪತ್ರಕರ್ತ,ಕವಿ ವಿರಾಜ್ ಅಡೂರು,ಕಾವ್ಯ, ಕುಶಲ ಕನ್ನಡಗ್ರಾಮ ಕಾರ್ಯಕ್ರಮ ನಿರೂಪಿಸಿದರು.
ಕಾಸರಗೋಡು ಕರ್ನಾಟಕ ಚುಟುಕು ವಾಚನ ಗೋಷ್ಠಿ
ಕಾಸರಗೋಡು ಜಿಲ್ಲಾ 6 ನೇ ಚುಟುಕು ಸಾಹಿತ್ಯ ಸಮ್ಮೇಳನಾಧ್ಯಕ್ಷ, ಖ್ಯಾತ ಕವಿ, ವ್ಯಂಗ್ಯ ಚಿತ್ರಕಾರ ವೆಂಕಟ್ ಭಟ್ ಎಡನೀರು ಅಧ್ಯಕ್ಷತೆಯಲ್ಲಿ ಕಾಸರಗೋಡು- ಕರ್ನಾಟಕ ಚುಟುಕು ವಾಚನಗೋಷ್ಠಿ ನಡೆಯಿತು. ಕಾಸರಗೋಡು ದಕ್ಷಿಣ ಕನ್ನಡ ಧಾರವಾಡ ಜಿಲ್ಲೆಯ ಚುಟುಕು ಕವಿಗಳು ಭಾಗವಹಿಸಿದರು.
ಕಾಸರಗೋಡು ಜಿಲ್ಲಾ 7 ನೇ ಚುಟುಕು ಸಾಹಿತ್ಯ ಸಮ್ಮೇಳನಾಧ್ಯಕ್ಷ ,ಕವಿ ಹರೀಶ ಸುಲಾಯ ಒಡ್ಡoಬೆಟ್ಟು, ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ ),ಕಾಸರಗೋಡು ಇದರ ಅಧ್ಯಕ್ಷೆ ಡಾ. ವಾಣಿಶ್ರೀ ಕಾಸರಗೋಡು,ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆ ನ್ಯಾಯವಾದಿ ಪರಿಮಳ ರಾವ್ ಕೆ.,ಕ ರಾ ಮ ಸಾ ಪ ಧಾರವಾಡ ಜಿಲ್ಲಾಧ್ಯಕ್ಷ ಸಂಜೀವ ದುಮಕನಾಳ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ವಿಶೇಷ ಪ್ರಶಸ್ತಿ ಪುರಸ್ಕೃತರಾದ ಶ್ರೀಕಾಂತ ಕಾಸರಗೋಡು ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.
ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ಕವಿಗಳಿಗೆ ಗೌರವ ಪತ್ರ ನೀಡಿ ಅಭಿನಂದಿಸಿದರು.

